ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘದ ಪದಾಧಿಕಾರಿಗಳೊಂದಿಗೆ ಅಕಾಡೆಮಿ ಅಧ್ಯಕ್ಷರ ಸಭೆ

ಬೆಂಗಳೂರು, 28 ಜನವರಿ 2020
12ನೇ ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವವನ್ನು ಅದ್ದೂರಿ ಹಾಗೂ ಯಶಸ್ವಿಯಾಗಿ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರುಗಳು ಮತ್ತು ನಿರ್ಮಾಪಕರ ಸಂಘದ ಪದಾಧಿಕಾರಿಗಳ ಜೊತೆ ಇಂದು ಪ್ರತ್ಯೇಕ ಸಭೆ ನಡೆಸಿ, ಸಿನಿಮೋತ್ಸವದ ಯಶಸ್ವಿಗೆ ತಮ್ಮ ಸಲಹೆ ಹಾಗೂ ಸೂಚನೆಗಳ ಜತೆಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.

ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ಮತ್ತು ಸಮಾರೋಪ ಸಮಾರಂಭಕ್ಕೆ ಉದ್ಯಮಕ್ಕೆ ನೀಡುವ ಆಹ್ವಾನ, ಚಿತ್ರೋದ್ಯಮದ ಗಣ್ಯರು, ಕಲಾವಿದರು, ತಂತ್ರಜ್ಞರು, ನಿರ್ದೇಶಕರು ಸೇರಿದಂತೆ ಚಿತ್ರರಂಗದ ಎಲ್ಲ ವರ್ಗದ ಜನರು ಸಕ್ರಿಯವಾಗಿ ಪಾಲ್ಗೊಳ್ಳುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು. ಸಿನಿಮೋತ್ಸವದ ಕಲಾತ್ಮಕ ನಿರ್ದೇಶಕರಾದ ವಿದ್ಯಾಶಂಕರ್, ಚಿತ್ರೋತ್ಸವದ ಸಿದ್ಧತೆಯ ಕುರಿತಂತೆ ಹೇಳಿದರು.

ಸಭೆಯಲ್ಲಿ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಿ.ಆರ್.ಜೈರಾಜ್‌, ಉಪಾಧ್ಯಕ್ಷರಾದ ಉಮೇಶ ಬಣಕಾರ್‌, ನಾಗಣ್ಣ, ಗೌರವ ಕಾರ್ಯದರ್ಶಿಗಳಾದ ಎನ್. ಎಂ. ಸುರೇಶ್‌, ಎ.ಗಣೇಶ್, ನರಸಿಂಹಲು, ಮಾಜಿ ಅಧ್ಯಕ್ಷರುಗಳಾದ ಕೆ.ಸಿ.ಎನ್.ಚಂದ್ರಶೇಖರ್‌, ಕೆ.ವಿ.ಚಂದ್ರಶೇಖರ್, ಸಾ.ರಾ.ಗೋವಿಂದು, ಥಾಮಸ್‌ ಡಿʼಸೋಜಾ, ನಿರ್ಮಾಪಕರ ಸಂಘದ ಅಧ್ಯಕ್ಷರಾದ ಡಿ.ಕೆ ರಾಮಕೃಷ್ಣ, ಉಪಾಧ್ಯಕ್ಷ ಎಂ.ಜಿ.ರಾಮಮೂರ್ತಿ, ಜಂಟಿ ಕಾರ್ಯದರ್ಶಿ ರಮೇಶ್‌ ಯಾದವ್‌, ಖಜಾಂಚಿ ಆರ್.ಎಸ್.‌ ಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಂದರರಾಜ್‌, ಪ್ರಮೀಳಾ ಜೋಷಾಯಿ, ನಂದಿಹಾಳ್‌, ಅಂಚೆಹಳ್ಳಿ ಶಿವಕುಮಾರ್ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ರಿಜಿಸ್ಟ್ರಾರ್‌ ಹಿಮಂತರಾಜು ಸ್ವಾಗತಿಸಿ, ವಂದಿಸಿದರು.